ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿ 67ರ ಗದಗ ರಸ್ತೆಯ ರೈಲ್ವೆ ನಿಲ್ದಾಣ ಸಮೀಪ ಬಸ್‌ನಲ್ಲಿ ಶನಿವಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿ-ಮಂಟೂರ ಮಾರ್ಗದ ಬಸ್‌ನಲ್ಲಿ ರಸ್ತೆ ಮಧ್ಯದಲ್ಲಿಯೇ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಜನರು ಪಾರಾಗಿದ್ದಾರೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.