ಜಿಲ್ಲೆ

ಕಂದಕಕ್ಕೆ ಉರುಳಿದ ಬಸ್ ಹಲವರಿಗೆ ಗಾಯ

Uttara Kannada - Subash Hegde

ಶಿರಸಿ : ಕುಮಟಾ-ಶಿರಸಿ ಮುಖ್ಯ ರಸ್ತೆಯ ಹನುಮಂತಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾದ ಘಟನೆ ಶನಿವಾರ ನಸುಕಿನ ಜಾವ ನಡೆದಿದೆ.

ಮಂಗಳೂರಿನಿಂದ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಹನುಮಂತಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಗೆ ಪಲ್ಟಿ ಹೊಡೆದಿದೆ.

ಘಟನೆಯಿಂದ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಬಸ್ ಚಾಲಕನಿಗೆ ಗಂಭೀರ ವಾಗಿ ಗಾಯಗಳಾಗಿವೆ.

ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.