ಮಂಗಳೂರು: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದ ಕಾಮುಕನಿಗೆ, ಪೊಲೀಸ್ ಕಮಿಷನರ್ ಎದುರಲ್ಲೇ ಸಂತ್ರಸ್ತ ಯುವತಿ ಕಪಾಳಮೋಕ್ಷ ಮಾಡಿದ್ದಾಳೆ.
ಜ.14ರಂದು ದೇರಳಕಟ್ಟೆ-ಮಂಗಳೂರು ಮಾರ್ಗದ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಪಕ್ಕದಲ್ಲೇ ಕುಳಿತುಕೊಂಡ ಕಾಮುಕ, ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಯುವತಿ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಬಸ್ನಿಂದ ಕೆಳಗಿಳಿದ ಆರೋಪಿ, ಮತ್ತೊಂದು ಬಸ್ನಲ್ಲಿ ಹಿಂಬಾಲಿಸಿಕೊಂಡು ಬಂದು ಮತ್ತೆ ಮತ್ತೆ ಯುವತಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದ. ಇದನ್ನೂ ಓದಿರಿ 100 ರೂ. ಮುಖಬೆಲೆಯ ಹಳೇ ನೋಟು ಇನ್ಮುಂದೆ ಚಲಾವಣೆ ಆಗಲ್ಲ! ಸೂಚನೆ ಕೊಟ್ಟ ಆರ್ಬಿಐ
ಈ ವೇಳೆ ಅಲ್ಲಿಗೆ ಬಂದ ಯುವತಿ ಮತ್ತು ಆಕೆಯ ಸ್ನೇಹಿತೆ ಇಬ್ಬರೂ ಕಾಮುಕನ ಕಪಾಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರ ಎದುರಲ್ಲೇ ಬಾರಿಸಿದಳು. ಯುವತಿಯ ಈ ದಿಟ್ಟತನಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಕಾಮುಕರಿಗೆ ತಕ್ಕ ಪಾಠ ಕಲಿಸಬೇಕು ಎಂಬೆಲ್ಲ ಕಮೆಂಟ್ ವ್ಯಕ್ತವಾಗಿದೆ.