Dead woman lying on the floor under white cloth with focus on hand 
ಜಿಲ್ಲೆ

ಬಸ್ ಡಿಕ್ಕಿ, ದ್ವಿಚಕ್ರ ವಾಹನ ಸವಾರ ಸಾವು

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಮಿನಿ ಟೋಲ್ ಬಳಿ ಶುಕ್ರವಾರ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ, ಖಾಸಗಿ ಕಂಪೆನಿ ಉದ್ಯೋಗಿ ಹೆಜಮಾಡಿಯ ತುಷಾರ್(32) ಎಂಬುವರು ಮೃತಪಟ್ಟಿದ್ದಾರೆ. ಬಸ್ ಡಿಕ್ಕಿಯಾದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ತುಷಾರ್ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.