ಜಿಲ್ಲೆ

ಪತ್ರಕರ್ತರಿಗೆ ಬಸ್​ ಪಾಸ್​: ಅರ್ಜಿ ಆಹ್ವಾನ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್​ಪಾಸ್​ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ, ವೇತನ ಪತ್ರ, ಬ್ಯಾಂಕ್​ ಸ್ಟೇಟ್​ಮೆಂಟ್​ಗಳ ಪೈಕಿ ಒಂದು ದಾಖಲೆ ಒದಗಿಸಬೇಕು.

ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್​ಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ಆಸಕ್ತರು ಗ್ರಾಮ ಒನ್​, ಕರ್ನಾಟಕ ಒನ್​ ಅಥವಾ ಬೆಂಗಳೂರು ಒನ್​ ಕೇಂದ್ರಗಳಲ್ಲಿ ಆನ್​ಲೈನ್​ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅಪ್​ಲೋಡ್​ ಮಾಡಿದ ದಾಖಲೆಗಳು ಹಾಗೂ ಆನ್​ಲೈನ್​ ಅರ್ಜಿಯ ಮುದ್ರಿತ ಪ್ರತಿಯನ್ನು ಜಿಲ್ಲಾ ವಾರ್ತಾಧಿಕಾರಿ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.