ಸಿರವಾರ: ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಪಟ್ಟಣದಲ್ಲಿ ನಡೆಯುತ್ತಿರುವ ಬಸ್ ನಿಲ್ದಾಣದ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದರು. ಕಾಮಗಾರಿ ವಿಳಂಬವಾಗಿರುವುದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಾಮಗಾರಿ ಆರಂಭವಾಗಿ ಒಂದು ವರ್ಷಕಳೆದರೂ ಪೂರ್ಣಗೊಂಡಿಲ್ಲ. ತ್ವರಿತವಾಗಿ ಹಾಗೂ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಚಂದ್ರಶೇಖರಗೆ ಸೂಚಿಸಿದರು. ಶಾಸಕ ಜಿ.ಹಂಪಯ್ಯ ನಾಯಕ, ಪ್ರಮುಖರಾದ ಬ್ರಿಜೇಶ್ ಪಾಟೀಲ್, ಶರಣಯ್ಯ ನಾಯಕ ಇತರರಿದ್ದರು.