ಜಿಲ್ಲೆ

ಕರ್ನಾಟಕ ಬಜೆಟ್ 2024: ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ನಿರ್ಧಾರ; ಸಿಎಂ ಘೋಷಣೆ

ಬೆಂಗಳೂರು: ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್‌ಎಫ್‌ಪಿ ಕರೆಯಲಾಗುವುದು. ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು.

ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಾಣ ಮಾಡಲಾಗುವುದು. 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.