ಜಿಲ್ಲೆ

ಸಾಲಬಾಧೆಯಿಂದ ಉದ್ಯಮಿ ಆತ್ಮಹತ್ಯೆ

ಮರಿದೇವ ಹೂಗಾರ

ಹುಬ್ಬಳ್ಳಿ: ಸಾಲಬಾಧೆಯಿಂದ ಬೇಸತ್ತ ಉದ್ಯಮಿಯೊಬ್ಬರು ತಮ್ಮ ಕಾರ್ಖಾನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗೋಕುಲ ರಸ್ತೆಯ ಕೈಗಾರಿಕಾ ವಲಯದಲ್ಲಿ ಮಂಗಳವಾರ ನಡೆದಿದೆ.

ಶ್ರೀನಿಧಿ ಸ್ಟೀಲ್ ವರ್ಕ್ ಮಾಲೀಕ ರವಿ ಮುರಗೋಡ (45) ಮೃತ ದುರ್ದೈವಿ. ಖಾಸಗಿ ಬ್ಯಾಂಕ್ ಸೇರಿ ಇತರೆಡೆ ಸಾಲ ಮಾಡಿದ್ದಾರೆ ಎನ್ನಲಾಗಿದ್ದು, ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.