ರಾಯಚೂರಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಭತ್ತ ಖರೀದಿ ಕೇಂದ್ರ ಟಾಸ್‌‌ಕೆೆರ್ಸ್ ಸಮಿತಿ ಸಭೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕೃಷ್ಣ ಶಾವಂತಗೇರಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪುಷ್ಪಲತಾ, ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷ ಸಾವಿತ್ರಿ ಪುರುಷೋತ್ತಮ, ಕಾರ್ಯದರ್ಶಿ ಕೊಂಡಾ ಕೃಷ್ಣಮೂರ್ತಿ ಇದ್ದರು. 
ಜಿಲ್ಲೆ

ನಿಯಮಾನುಸಾರ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಿ

ರಾಚಯ್ಯ ಸ್ವಾಮಿ

ರಾಯಚೂರು: ಮುಂಗಾರು ಹಂಗಾಮಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಎಲ್ಲ ತಾಲೂಕು ಕೇಂದ್ರಗಳ್ಲಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ನಿಯಮಾನುಸಾರ ಭತ್ತ ಖರೀದಿಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಅಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಟಾಸ್‌‌ಕೆೆರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ಸರ್ಕಾರದ ಆದೇಶದಂತೆ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿಗೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದರು.
ಪ್ರತಿ ಖರೀದಿ ಕೇಂದ್ರದಲ್ಲಿ ಕಡ್ಡಾಯವಾಗಿ ಕೃಷಿ ಇಲಾಖೆಯಿಂದ ಗ್ರೇಡರ್‌ಗಳನ್ನು ನೇಮಕ ಮಾಡಬೇಕು. ಖರೀದಿ ಏಜೆನ್ಸಿಯ ಅಕಾರಿಗಳು ತಮ್ಮ ಸಂಸ್ಥೆಗೆ ವಹಿಸಿರುವ ಕಾರ್ಯ ಪ್ರಗತಿ ಬಗ್ಗೆ ಆಗಾಗ್ಗೆ ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು.
ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಠ 40 ಕ್ವಿಂಟಾಲ್‌ವರೆಗೆ ಮೀರದಂತೆ ಖರೀದಿಸಬೇಕು. ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಭತ್ತ ಖರೀದಿಸುವಂತಿಲ್ಲ. ರೈತರಿಗೆ ಖರೀದಿ ಮಾಡಿದ 15 ದಿನದೊಳಗೆ ಅವರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಬೇಕು.
ಭತ್ತ ಖರೀದಿಗೆ ಸರ್ಕಾರ ದರ ನಿಗದಿಪಡಿಸಿದ್ದು, ಸಾಮಾನ್ಯ ಭತ್ತಕ್ಕೆ ಕ್ವಿಂಟಾಲ್‌ಗೆ 2,183 ರೂ., ಗ್ರೇಡ್ ಎ ಭತ್ತಕ್ಕೆ 2,203 ರೂ.ಗಳನ್ನು ಸರ್ಕಾರ ದರ ನಿಗದಿ ಮಾಡಿದೆ. ಖರೀದಿಸಿದ ಭತ್ತವನ್ನು ಗೋದಾಮುಗಳಲ್ಲಿ ಸಂಗ್ರಹಿಸಿ ಹತ್ತಿರದ ಅಕ್ಕಿಗಿರಣಿಗಳಿಗೆ ಸಾಗಣೆ ಮಾಡಬೇಕು.
ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ ನ.15ರಿಂದ ಆರಂಭವಾಗುತ್ತಿದ್ದು, ನೋಂದಾಯಿತ ರೈತರಿಂದ ಡಿ.1 ರಿಂದ ಮಾ.31ರವರೆಗೆ ಭತ್ತ ಖರೀದಿಸಲಾಗುತ್ತಿದ್ದು, ಎಲ್ಲ ಪ್ರಕ್ರಿಯೆಗಳನ್ನು ನಿಯಮಾನುಸಾರ ನಡೆಸಬೇಕು ಎಂದು ಡಾ.ಕೆ.ಆರ್.ದುರಗೇಶ ಸೂಚಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕೃಷ್ಣ ಶಾವಂತಗೇರಾ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳದ ಅಕಾರಿ ವೆಂಕಟೇಶ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಅಕಾರಿ ಮಹ್ಮದ್ ಜಿಲಾನಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪುಷ್ಪಲತಾ, ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷ ಸಾವಿತ್ರಿ ಪುರುಷೋತ್ತಮ, ಕಾರ್ಯದರ್ಶಿ ಕೊಂಡಾ ಕೃಷ್ಣಮೂರ್ತಿ ಉಪಸ್ಥಿತರಿದ್ದರು.