ಕಂಪ್ಲಿ ತಹಸಿಲ್ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ನಿರೀಕ್ಷಕ ನಾಗರೆಡ್ಡಿ ಸಾರ್ವಜನಿಕರಿಂದ ಅಹವಾಲು ಸ್ವಿಕರಿಸಿದರು. ನರೇಗಾ ಎಡಿ ಕೆ.ಎಸ್.ಮಲ್ಲನಗೌಡ, ಶಿರಸ್ತೇದಾರ್ ಎಸ್.ಡಿ.ರಮೇಶ, ಆರ್‌ಒ ಪ್ರಶಾಂತ ಚಿತ್ರಗಾರ್, ಅಬಕಾರಿ ನಿರೀಕ್ಷಕಿ ಎಂ.ಉಷಾ ಯಂಡಿಗೇರಿ, ಎಇಇ ಜಿ.ಎನ್.ಮಲ್ಲಿಕಾರ್ಜುನಗೌಡ ಇತರರಿದ್ದರು. 
ಜಿಲ್ಲೆ

ಗುಣಮಟ್ಟದ ಪಡಿತರ ಖರೀದಿಸಿ

ಗಾಯತ್ರಿ ಮಾಲಿಪಾಟೀಲ್

ಕಂಪ್ಲಿ: ಮಳೆಗಾಲ ಹಿನ್ನೆಲೆಯಲ್ಲಿ ಶಿಥಿಲಗೊಂಡಿರುವ ಶಾಲಾ ಕೊಠಡಿಗಳಲ್ಲಿ ತರಗತಿ ನಡೆಸಬಾರದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಲೋಕಾಯುಕ್ತ ನಿರೀಕ್ಷಕ ನಾಗರೆಡ್ಡಿ ಹೇಳಿದರು.

ಪಟ್ಟಣದ ತಹಸಿಲ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಲಾ ಆವರಣದಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಿ. ಇದರಿಂದ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದರು.

ಹಾಸ್ಟೆಲ್‌ಗಳಿಗೆ ಗುಣಮಟ್ಟದ ಪಡಿತರ ಖರೀದಿಸಿ ವಿದ್ಯಾರ್ಥಿಗಳಿಗೆ ಶುಚಿ, ರುಚಿಯಾದ ಆಹಾರ ನೀಡಬೇಕು. ದೊಡ್ಡ ಗಾತ್ರದ ಹಾಗೂ ಗುಣಮಟ್ಟದ ಮೊಟ್ಟೆ ಖರೀದಿಸಬೇಕು. ಪುರಸಭೆಯಿಂದ ಪಟ್ಟಣದಲ್ಲಿ ಸ್ವಚ್ಛತೆ, ಸೊಳ್ಳೆ ನಿಯತ್ರಣ, ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಅಧಿಕಾರ ಇದ್ದಾಗ ಸಿಗುವ ಗೌರವ ನಿವೃತ್ತಿ ನಂತರವೂ ದೊರೆಯುವಂತೆ ಕರ್ತವ್ಯ ನಿರ್ವಹಿಸಬೇಕು. ಅಧಿಕಾರಿಗಳು ಬಡವರಿಗೆ ಕಿರಿಕಿರಿ ಮಾಡಿದೆ ಸೌಜನ್ಯದಿಂದ ವರ್ತಿಸಬೇಕೆಂದು ನಾಗರೆಡ್ಡಿ ತಾಕೀತು ಎಂದರು.

ಷಾ.ಮಿಯಾಚಂದ್ ಹೈಸ್ಕೂಲ್ ಕಟ್ಟಡ ಛಾವಣಿ ದುರಸ್ತಿ, ಕೊಠಡಿ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಸೂಚಿಸಿದರು. ಪುರಸಭೆ ಮತ್ತು ಲೋಕೋಪಯೋಗಿ ಇಲಾಖೆಗಳಿಗೆ ಸಂಬಂಧಿಸಿದ ತಲಾ ಒಂದು ಅರ್ಜಿ ಸ್ವೀಕರಿಸಲಾಯಿತು.