ಜಿಲ್ಲೆ

ಅಲ್ಪಸಂಖ್ಯಾತ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಯ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 3.5 ಲಕ್ಷ ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್ನಲ್ಲಿ ಹೆಸರು ನೊಂದಾಯಿಸಿರಬೇಕು. ಅಭ್ಯರ್ಥಿಯ ವಯಸ್ಸು 30 ವರ್ಷದೊಳಗಿರಬೇಕು. ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 5 ಸಾವಿರ ರೂ. ತರಬೇತಿ ಭತ್ಯೆ ನೀಡಲಾಗುವುದು.

ಅಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿ.ವಿ.ಟವರ್, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು 560 001 ಇಲ್ಲಿಗೆ ಡಿ.20 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.: 080-22866718 ಗೆ ಸಂಪರ್ಕಿಸಬಹುದು.