ಶಿವಮೊಗ್ಗ: ಶಿವಮೊಗ್ಗ-ಚಿತ್ರದುರ್ಗ ನಡುವಿನ 134 ಕಿಮೀ ಚತುಷ್ಪಥ ರಸ್ತೆ ಸೇರಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಡಿ.19ರಂದು ಕೇಂದ್ರ ಭೂ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.
ಬುಧವಾರ ಸುದ್ದಿಗಾರರ ಜತೆ ಮಾತನಾಡಿ, 529 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ 134 ಕಿ.ಮೀ. ರಸ್ತೆ ನಿರ್ವಣ, ಹೊಳೆಹೊನ್ನೂರು ಸಮೀಪದ ತುಂಗಾ ಸೇತುವೆ ಸೇರಿ ಸೇರಿ ನಾಲ್ಕು ಮೇಲ್ಸುತುವೆಗಳು ನಿರ್ವಣವಾಗಲಿದೆ. ಚನ್ನಗಿರಿ, ಹೊಸದುರ್ಗ ಸೇರಿ ಪ್ರಮುಖ ನಗರದಲ್ಲಿ ಬೈಪಾಸ್ ರಸ್ತೆ ಕೂಡ ನಿರ್ವಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸೊಲ್ಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಶಿವಮೊಗ್ಗ ಬಸ್ನಿಲ್ದಾಣದಿಂದ ತೀರ್ಥಹಳ್ಳಿ ಮಾರ್ಗವಾಗಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲಾಗುವುದು. ಅದಕ್ಕಾಗಿ 96 ಕೋಟಿ ರೂ. ಬಿಡುಗಡೆಯಾಗಿದೆ. 43 ಕೋಟಿರೂ. ವೆಚ್ಚದ ವಿದ್ಯಾನಗರ ರೈಲ್ವೆ ಮೇಲ್ಸೇತುವೆ ನಿರ್ವಣಕ್ಕೂ ಶಂಕುಸ್ಥಾಪನೆ ನೆರವೇರಲಿದೆ ಎಂದರು.
ಮಾಜಿ ಎಂಎಲ್ಸಿಗಳಾದ ಆರ್.ಕೆ.ಸಿದ್ದರಾಮಣ್ಣ, ಎಂ.ಬಿ.ಭಾನುಪ್ರಕಾಶ್, ಡಿ.ಎಸ್.ಅರುಣ್, ಟಿ.ಡಿ.ಮೇಘರಾಜ್ ಮತ್ತಿತರರಿದ್ದರು.