ಜಿಲ್ಲೆ

ಬ್ಯಾಡಗಿಯಲ್ಲಿ ಜನತಾ ದರ್ಶನ ಅ.17ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಅ.17ರಂದು ಬ್ಯಾಡಗಿ ತಹಸೀಲ್ದಾರ್ ಕಚೇರಿಯಲ್ಲಿ ಜರುಗಲಿದೆ.
ಬ್ಯಾಡಗಿ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿದೆ.
ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಬ್ಯಾಡಗಿ ತಹಸೀಲ್ದಾರ್ ಕಚೇರಿಯಲ್ಲಿ ತೆರೆಯಲಾದ ಕೌಂಟರ್‌ಗಳಲ್ಲಿ ಸಾರ್ವಜನಿಕ ಕುಂದುಕೊರತೆ ನಿವಾರಣೆ ವ್ಯವಸ್ಥೆ (ಐಪಿಜಿಆರ್‌ಎಸ್) ತಂತ್ರಾಂಶದಲ್ಲಿ ದಾಖಲಿಸಿಕೊಂಡು, ಸ್ವೀಕೃತಿ ಪಡೆದುಕೊಳ್ಳಬೇಕು. ಸ್ವೀಕೃತಿಗೊಂಡ ಅರ್ಜಿಗಳನ್ನು ಪರಿಶೀಲಿಸಿ ಕುಂದುಕೊರತೆಗಳಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.