ಜಿಲ್ಲೆ

ತಂತ್ರಜ್ಞಾನ ಬಳಕೆಯೊಂದಿಗೆ ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆ - ಸಚಿವ ದಿನೇಶ್ ಗುಂಡೂರಾವ್

ಪಂಕಜ ಕೆ.ಎಂ.

ಬೆಂಗಳೂರು: ಬೆಂಗಳೂರಿನ ಸೆಂಟರ್ ಫಾರ್ ಸೆಲ್ಯುಲಾರ್ ಮತ್ತು ಮಾಲಿಕ್ಯುಲರ್ ಪ್ಲಾಟ್‌ಫಾರ್ಮ್‌ಗಳ ಕೇಂದ್ರ ಸಿ-ಕ್ಯಾಂಪ್ ಗೆ ಬುಧವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ ಭೇಟಿ ನೀಡಿ ತಜ್ಞರ ಜೊತೆ ಸಮಾಲೋಚನೆ ನಡೆಸಿದರು.

ಈ ವೇಳೆ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಾಧುನಿಕ ಸಂಶೋಧನೆಗೆ ಸಿ-ಕ್ಯಾಂಪ್ ಪ್ರಸಿದ್ಧಿಯಾಗಿದೆ. ಸಂಸ್ಥೆಯ ಸಹಯೋಗದೊಂದಿಗೆ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರಲಾಗುವುದು. ಇದಕ್ಕೆ ಈ ಪಾಲುದಾರಿಕೆ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯ, ಆಧುನಿಆಕ ಸೌಲಭ್ಯಗಳ ಅನುಷ್ಠಾನ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಸೇವೆಗಳ ನಿರ್ವಹಣೆ ಕುರಿತು ಚರ್ಚಿಸಲಾಯಿತು. ಈ ವೇಳೆ ಸಿ-ಕ್ಯಾಂಪನ್ ತಜ್ಞರು ಆರೋಗ್ಯ ವಲಯಕ್ಕೆ ಅನುಕೂಲವಾಗುವಂತಹ ತಂತ್ರಜ್ಞಾನ ಆಧಾರಿತ ಉಪಕರಣಗಳ ಪರಿಚಯ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಸಿ-ಕ್ಯಾಂಪ್‌ನ ಸಿಇಒ ಡಾ. ತಸ್ಲಿಮ್ ಆರ್ಿ ಸೈಯದ್, ಆರೋಗ್ಯ ಇಲಾಖೆ ಆಯುಕ್ತ ಡಿ. ರಣ್‌ದೀಪ್, ರಾಷ್ಟ್ರೀಯ ಆರೋಗ್ಯ ಮಿಷನ್ (ಕರ್ನಾಟಕ) ನಿರ್ದೇಶಕ ಡಾ. ನವೀನ್ ಭಟ್ ಇತರರು ಇದ್ದರು.