ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್ ಎಸ್ ಹೆಗ್ಡೆ, ವಿನಯ್ ಪ್ರಶಾಂತ ಹಿರೇಮಠ, ಸಾನ್ವಿ ರಾವ್.  
ಜಿಲ್ಲೆ

ಕ್ರಿಯೆಟಿವ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಧನೆ :ಸಿ.ಎ ಫೌಂಡೇಶನ್ ಫಲಿತಾಂಶ ಪ್ರಕಟ

ಇಂದಿರಾ ಎನ್ ಕೆ

ಕಾರ್ಕಳ: ಪಿಯು ಕಾಲೇಜು ಇನ್‌ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆ ನಡೆಸಿದ ಸಿ.ಎ ಫೌಂಡೇಶನ್ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಈಗಾಗಲೇ ಸಿಎ ಫೌಂಡೇಶನ್ ಫಲಿತಾಂಶದಲ್ಲಿ ಮಂಚೂಣಿಯಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ಕೆ.ವಿ ಮೌರ್ಯ (273), ಭಕ್ತಿ ಕಾಮತ್ (253), ಸುಪ್ರೀತ್ ಎಸ್ ಹೆಗ್ಡೆ (248), ವಿನಯ್ ಪ್ರಶಾಂತ ಹಿರೇಮಠ (238), ಸಾನ್ವಿ ರಾವ್ (223) ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆ ಪಡೆದಿದ್ದಾರೆ. ಆಡಳಿತ ಮಂಡಳಿ, ಪ್ರಾಂಶುಪಾಲ, ಬೋಧಕ ಬೋಧಕೇತರ ವೃಂದ, ಪರೀಕ್ಷಾ ಸಂಯೋಜಕ ರಾಘವೇಂದ್ರ ಬಿ ರಾವ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.