ಮೈಸೂರು: ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಲಿಂಗಾಯತ ಗೌಡ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್ ಖಂಡಿಸಿದ್ದಾರೆ. ಪಂಚಮಸಾಲಿ ಮತ್ತು ಗೌಡ ಲಿಂಗಾಯತ 2ಎ ಮೀಸಲು
ಹೋರಾಟದಲ್ಲಿ ಭಾಗವಹಿಸಿದ್ದ ಶ್ರೀಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಸಮಾಜದ ಪ್ರಮುಖ ಮುಖಂಡರ ಮೇಲೆ ಪೋಲೀಸರ ಮೂಲಕ ಸರ್ಕಾರ ಲಾಠಿ ಪ್ರಹಾರ ಮಾಡಿಸಿದೆ ಎಂದವರು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ರೀತಿ ದೌರ್ಜನ್ಯವೆಸಗಿ ಪಂಚಮಸಾಲಿ, ಗೌಡ ಲಿಂಗಾಯತ ಸಮುದಾಯದ ನ್ಯಾಯಯುತ ಹೋರಾಟ ಹತ್ತಿಕ್ಕಲು ಯತ್ನಿಸಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಕ್ರಮ ಖಂಡನೀಯ ಎಂದವರು ತಿಳಿಸಿದ್ದಾರೆ. ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದ ಸಂವಿಧಾನ ಹಕ್ಕು. ಇದನ್ನು ಸರ್ಕಾರ ಗೌರವಿಸಬೇಕು. ತಡೆಯುವ ಪ್ರಯತ್ನ ಮಾಡಬಾರದು. ಸ್ವಾಮೀಜಿ ನೇತೃತ್ವದ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದವರು ಒತ್ತಾಯಿಸಿದ್ದಾರೆ.