ಮಡಿಕೇರಿ: ಕೊಡಗು ವಿದ್ಯಾಲಯದ ಎನ್‌ಸಿಸಿ ಘಟಕದ ವತಿಯಿಂದ ನಗರದಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪ್ರತಿಮೆಯನ್ನು ಶುಚಿಗೊಳಿಸುವುದರ ಮೂಲಕ ಕಾರ್ಗಿಲ್ ವಿಜಯ ದಿವಸ್‌ನ್ನು ಆಚರಿಸಲಾಯಿತು.
ಕೊಡಗು ವಿದ್ಯಾಲಯದ ಎನ್‌ಸಿಸಿ ಕೆಡೆಟ್‌ಗಳು ಪ್ರತಿಮೆಯನ್ನು ಶುಚಿಗೊಳಿಸಿ, ಆವರಣದ ಸುತ್ತ ಬೆಳೆದಿದ್ದ ಕಾಡು ಸಸಿಗಳನ್ನು ಕಿತ್ತು ಶುಚಿಗೊಳಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ, ಆಡಳಿತ ಅಧಿಕಾರಿ ಪಿ.ರವಿ ನೆರವೇರಿಸಿದರು. ಶಾಲೆಯ ಎನ್‌ಸಿಸಿ ಅಧಿಕಾರಿ ಮೇಜರ್ ದಾಮೋದರ ಗೌಡ ಹಾಗೂ ಎನ್‌ಸಿಸಿ ಸಿಬ್ಬಂದಿಗಳು ಹಾಜರಿದ್ದರು.