ಜಿಲ್ಲೆ

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಕರೆ

ರಾಘವೇಂದ್ರಗೌಡ ಭೀ ಪಾಟೀಲ್

ಚಿಕ್ಕೋಡಿ: ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 23 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಅರ್ಜಿ ಸಲ್ಲಿಸಲು ಏ.16 ರಿಂದ ಮೇ 16ರ ವರೆಗೆ ಕಾಲಾವಕಾಶವಿದೆ. ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ದೂ.ಸಂ 08338-273371 ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.