ವಿಜಯವಾಣಿ ಸುದ್ದಿಜಾಲ ಧಾರವಾಡ
ಸರ್ಕಾರದ ಯೋಜನೆಗಳನ್ನು ಪ್ರಚುರಪಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾ ತಂಡಗಳಿ೦ದ ಅರ್ಜಿ ಆಹ್ವಾನಿಸಲಾಗಿದೆ. ಬೀದಿನಾಟಕ ತಂಡದಲ್ಲಿ 8 ಕಲಾವಿದರಿರಬೇಕು. ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಜಾನಪದ ಸಂಗೀತ ಕಲಾ ತಂಡದಲ್ಲಿ ಮೂವರು ಕಲಾವಿದರಿದ್ದು, ಓರ್ವ ಮಹಿಳೆ, ಓರ್ವ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. ಆ. 12ರಂದು ಬೆಳಗ್ಗೆ 11 ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಆಸಕ್ತ ತಂಡಗಳು ಆ. 1ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.