ಜಿಲ್ಲೆ

ಕಲಾವಿದರಿಂದ ಅರ್ಜಿ ಆಹ್ವಾನ

ಗಿರೀಶ ಸಗರ

ವಿಜಯಪುರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಚಿಗುರು, ಯುವ ಸೌರಭ ಹಾಗೂ ಸಾಂಸತಿಕ ಸೌರಭ ಕಾರ್ಯಕ್ರಮ ಆಯೋಜನೆ ಉದ್ದೇಶದಿಂದ ಇಲಾಖೆಯ ಸಾಂಸತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಚಿಗುರು ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು 8 ರಿಂದ 14 ವರ್ಷದ ಪ್ರತಿಭಾವಂತ ಬಾಲ ಪ್ರತಿಭೆಗಳಾಗಿರಬೇಕು. ಯುವ ಸೌರಭ ಕಾರ್ಯಕ್ರಮಕ್ಕೆ ಭಾಗವಹಿಸುವವರು 15 ರಿಂದ 30 ವರ್ಷದ ಪ್ರತಿಭಾವಂತ ಯುವ ಕಲಾವಿದರಾಗಿರಬೇಕು. ಆಕಾಶವಾಣಿ ವಿವಿಧ ಗ್ರೇಡ್​ಗಳ ಕಲಾವಿದರನ್ನು ಹಾಗೂ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿ ಪುರಸತ ಕಲಾವಿದರನ್ನು ಸಾಂಸತಿಕ ಸೌರಭ ಕಾರ್ಯಕ್ರಮಕ್ಕೆ ಪರಿಗಣಿಸಲಾಗುತ್ತದೆ.

ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಗತ್ಯ ದಾಖಲೆ ಸಹಿತ ಅರ್ಜಿಯನ್ನು ಜು. 8 ರೊಳಗಾಗಿ ಇಲ್ಲಿನ ಸ್ಟೇಷನ್​ ರಸ್ತೆಯ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸತಿ ಇಲಾಖೆ, ಕಂದಗಲ್ಲ ಹನುಮಂತರಾಯ ರಂಗಮಂದಿರಕ್ಕೆ ಖುದ್ದಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸತಿ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.