ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ ಗೌರಮ್ಮ ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ.
೨೦೨೨-೨೩ ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕಿಯರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ-೯೪೪೮೩೪೬೨೭೬ ಗೆ ಏ.೨೦ ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.