ಜಿಲ್ಲೆ

ಸಮೀಕ್ಷೆ ಯಶಸ್ವಿಗೊಳಿಸಲು ಕರೆ

ಮರಿದೇವ ಹೂಗಾರ

ಹುಬ್ಬಳ್ಳಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಮಿತ್ತ ಸಮೀಕ್ಷಾ ಸಾಮಗ್ರಿಗಳ ವಿತರಣೆ ಹಾಗೂ ಸಮೀಕ್ಷೆ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಇಲ್ಲಿಯ ಶಹರ ಬಿಇಒ ಕಚೇರಿಯಲ್ಲಿ ಸೋಮವಾರ ಏರ್ಪಡಿಸಲಾಗಿತ್ತು.

ಶಹರ ತಹಸೀಲ್ದಾರ್ ಮಹೇಶ ಗಸ್ತೆ ಮಾತನಾಡಿ, ಸಮೀಕ್ಷೆದಾರರಿಗೆ ತರಬೇತಿ ನೀಡಲಾಗಿದೆ. ಕಿಟ್‌ಗಳನ್ನೂ ವಿತರಿಸಲಾಗಿದೆ. ಶಹರದಲ್ಲಿ ಯಾವುದೇ ಮನೆ, ಕುಟುಂಬದ ಸದಸ್ಯರು ಸಮೀಕ್ಷೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಅ. 7ರೊಳಗೆ ಸಮೀಕ್ಷೆ ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.

ಶಹರ ಬಿಇಒ ಎಚ್.ಎಂ. ಫಡ್ನೇಶಿ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಮೀಕ್ಷೆ ಇದು. ಮನೆ ಮನೆಗೆ ತೆರಳಿ ಕರ್ತವ್ಯ ನಿರ್ವಹಿಸಬೇಕು. ತಾಂತ್ರಿಕ ತೊಂದರೆ ಕಂಡು ಬಂದಲ್ಲಲಿ ಮಾಸ್ಟರ್ ಟ್ರೇನರ್ಸ್ಗ್‌ಳಿಂದ ಸಹಾಯ ಪಡೆದು ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಿಸಿಎಂ ತಾಲೂಕು ಅಧಿಕಾರಿ ನಾಗರತ್ನ ಕ್ಯಾಸನೂರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ಜಂಗಳಿ ಮಾತನಾಡಿದರು.

ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಮೀಕ್ಷಾ ಕಿಟ್‌ಗಳನ್ನು ವಿತರಿಸಲಾಯಿತು. ಕೆ.ಎಂ. ಗೆದಗೇರಿ ನಿರೂಪಿಸಿದರು.

ಬಿ.ವೈ. ಅಂಬಿಗೇರ ವಂದಿಸಿದರು.