ವಿಜಯವಾಣಿ ಸುದ್ದಿಜಾಲ ಧಾರವಾಡ
ಕಲಾಶಕ್ತಿ ಫೌಂಡೇಶನ್ ವತಿಯಿಂದ ಆಯೋಜಿಸಿರುವ ಕಲಾ ಲೋಕದಲ್ಲಿ ಒಂದು ಪುಟ್ಟ ಹೆಜ್ಜೆ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಮೇ 13ರಂದು ಸುವರ್ಣ ಸಮುಚ್ಚಯ ಭವನದಲ್ಲಿ ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ ಎಂದು ಫೌಂಡೇಶನ್ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭವನ್ನು ರಂಗಾಯಣ ನಿರ್ದೇಶಕ ಡಾ. ರಾಜು ತಾಳಿಕೋಟಿ ಉದ್ಘಾಟಿಸುವರು. ಅತಿಥಿಗಳಾಗಿ ನಾಗರಾಜ ಡಿ.ಎಲ್., ಪಾಲಿಕೆ ಸದಸ್ಯ ಮಂಜುನಾಥ ಬಟ್ಟೆಣ್ಣವರ ಆಗಮಿಸುವರು. ಕಲಾಶಕ್ತಿ ಪ್ರತಿಷ್ಠಾನದ ಅಧ್ಯಕ್ಷೆ ಅನ್ನಪೂರ್ಣ ಪಾಟೀಲ ಉಪಸ್ಥಿತರಿರುವರು. ನಿತಿನ್ ರಾಮದುರ್ಗ ಹಾಗೂ ಶ್ರೀಕಾಂತ ಪುರ್ಲಿ ಅವರಿಗೆ ಸನ್ಮಾನಿಸಲಾಗುವುದು. ಮಾರ್ತಾಂಡಪ್ಪ ಕತ್ತಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮಾರ್ತಾಂಡಪ್ಪ ಕತ್ತಿ ಮಾತನಾಡಿ, ಕೊಪ್ಪದಕೇರಿ ಶಿವಾಲಯದಲ್ಲಿ ಹಲವು ವರ್ಷಗಳಿಂದ ಶಿಬಿರದ ಆಯೋಜಿಸಲಾಗುತ್ತಿದೆ. ಆದರೆ ಈ ವರ್ಷ ವಿಶಿಷ್ಟವಾಗಿ ಏರ್ಪಡಿಸುವ ಮೂಲಕ ಮಕ್ಕಳಿಗೆ ಕಲೆ, ಜತೆಗೆ ನೃತ್ಯದ ತರಬೇತಿ ನೀಡಲಾಗಿದೆ. 50ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು ಎಂದರು.