ಜಿಲ್ಲೆ

ಮೊರಬದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ನವಲಗುಂದ ತಾಲೂಕಿನ ಮೊರಬ ಗ್ರಾಮದ ದೊಡ್ಡಪೇಟೆಯಲ್ಲಿರುವ ಶ್ರೀ ಕಲ್ಮೇಶ್ವರ ದೇವಸ್ಥಾನದ ಆವರಣದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆ. 10ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಆಯೋಜಿಸಲಾಗಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ವಿಶ್ವ ಮಧ್ವ ಮಹಾಪರಿಷತ್, ಶ್ರೀ ಗುರು ಮಹಿಪತಿರಾಜ ನೇತ್ರ ಸೇವಾಸಂಸ್ಥೆ ಹಾಗೂ ಡಾ. ಎಂ.ಎಂ ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ.

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಅದ್ಯಕ್ಷ ಅಡಿವೆಪ್ಪ ಮನಮಿ ಹಾಗೂ ಮೊರಬ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತೆವ್ವ ಜಾಲಿಹಾಳ ಉದ್ಘಾಟಿಸುವರು.

ಡಾ. ಎಂ.ಎಂ ಜೋಶಿ ಕಣ್ಣಿನ ಆಸ್ಪತ್ರೆಯ ನುರಿತ ವೈದ್ಯರ ತಂಡ ಕಣ್ಣಿನ ತಪಾಸಣೆ ನಡೆಸಿ, ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಜನರನ್ನು ಆಯ್ಕೆ ಮಾಡಲಿದ್ದಾರೆ. ಆಯ್ಕೆಯಾದ ಕಣ್ಣಿನ ಪೊರೆ ಬಂದಿರುವ ರೋಗಿಗಳನ್ನು ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿರುವ ಡಾ. ಎಂ.ಎಂ ಜೋಶಿ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವುದು.

ಮೊರಬ ಗ್ರಾಮದ ಸುತ್ತ್ತನ ಹಳ್ಳಿಗಳಾದ ತಲೆ ಮೊರಬ, ಶಿರೂರು, ಆಯಟ್ಟಿ, ಗುಮ್ಮಗೋಳ, ತಿರ್ಲಾಪೂರ ಗ್ರಾಮಗಳ ಜನರು ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಕ್ಷಮತಾ ಸಂಚಾಲಕ ಗೋವಿಂದ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಬಿರಾರ್ಥಿಗಳ ನೋಂದಣಿ ಕಾರ್ಯ ಬೆಳಗ್ಗೆ 9 ಗಂಟೆಯಿಂದ ಆರಂಭವಾಗುವುದು. ಶಿಬಿರದಲ್ಲಿ ಪಾಲ್ಗೊಳ್ಳುವವರು ಆಧಾರ ಕಾರ್ಡ್ ಅಥವಾ ಇತರ ಗುರುತಿನ ಚೀಟಿ ತರಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.