ಕುಶಾಲನಗರ:
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನ ಜಾಗೃತಿ ವೇದಿಕೆ ಹಾಗೂ ಯೋಜನೆಯ ವಲಯ ಒಕ್ಕೂಟ, ವಿವಿಧ ಸಮಿತಿಗಳ ಸಹಕಾರದೊಂದಿಗೆ ಸ್ವಸ್ಥ ಸಮಾಜದ ಪರಿಕಲ್ಪನೆಯೊಂದಿಗೆ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಮದ್ಯವರ್ಜನ ಶಿಬಿರವನ್ನು ಕುಶಾಲನಗರದಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಇಲ್ಲಿನ ಕೊಡವ ಸಮಾಜ ಮಂದಿರದ ಸಭಾಂಗಣದಲ್ಲಿ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಅಭಿಮನ್ಯು ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಮಾಲೋಚನಾ ಸಭೆಯಲ್ಲಿ ಜುಲೈ ಎರಡನೇ ವಾರದಲ್ಲಿ ಶಿಬಿರ ನಡೆಸಲು ತೀರ್ಮಾನಿಸಲಾಯಿತು.
ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಶಿಬಿರದ ಕುರಿತು ಮಾಹಿತಿ ನೀಡಿದರು.ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿದರು.
ಈ ಸಂದರ್ಭ ಜಿಲ್ಲಾ ಜನಜಾಗತಿ ವೇದಿಕೆ ಉಪಾಧ್ಯಕ್ಷ ಪುಂಡರೀಕಾಕ್ಷ, ಕೊಡವ ಸಮಾಜದ ಅಧ್ಯಕ್ಷ ಮನುನಂಜುಂಡ, ಕನ್ನಡ ಸಾಹಿತ್ಯ ಪರಿಷತ್ತು ಉಪಾಧ್ಯಕ್ಷ
ದೇವರಾಜ, ಕನ್ನಡ ರಕ್ಷಣಾ ವೇದಿಕೆಯ ಧನರಾಜ್, ಭೂಮಿಕಾ ಮಹಿಳಾ ವೇದಿಕೆ ಅಧ್ಯಕ್ಷೆ ಫಿಲೋಮಿನಾ, ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿಚಂದ್ರು,ಗುಡ್ಡೆಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಸೌಮ್ಯ, ಹಿರಿಯ ಉದ್ಯಮಿ ರಾಮದಾಸ್, ವೇದಿಕೆ ಸದಸ್ಯರಾದ ಸುರೇಶ್, ಪೂರ್ಣಿಮಾ, ಚಂದ್ರಮೋಹನ್ , ಚಂದ್ರು , ರಾಜಶೇಖರ್, ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಕುಶಾಲನಗರ ವಲಯ ಮೇಲ್ವಿಚಾರಕ ನಾಗರಾಜ್ ಇದ್ದರು.
ಸಮಿತಿ ರಚನೆ : ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನು ನಂಜುಂಡ ಹಾಗೂ ಗೌರವಾಧ್ಯಕ್ಷ ಪುಂಡರೀಕಾಕ್ಷ ಅವರನ್ನು ಆಯ್ಕೆ ಮಾಡಲಾಯಿತು.