ವಿಜಯವಾಣಿ ಸುದ್ದಿಜಾಲ ಕೋಟ
ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಸಮುದ್ಯತಾ ಗ್ರೂಪ್ಸ್ ಕೋಟ ಸಹಯೋಗದೊಂದಿಗೆ 214ನೇ ವಾರದ ಪರಿಸರಸ್ನೇಹಿ ಹಸಿರುಜೀವ ಅಭಿಯಾನ ಅಂಗವಾಗಿ ಗೀತಾನಂದ ಫೌಂಡೇಶನ್ ಮಣೂರು, ಬ್ರಹ್ಮಾವರ ಸುವರ್ಣ ಎಂಟರ್‌ಪ್ರೈಸಸ್ ಕೊಡಮಾಡಿದ ಗಿಡ ನಾಟಿ ಕಾರ್ಯಕ್ರಮ ಕೋಟ ರಾಷ್ಟ್ರೀಯ ಹೆದ್ದಾರಿಯ ವಿವಿಧ ಭಾಗಗಳಲ್ಲಿ ನಡೆಯಿತು.
ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಎಚ್.ಕುಂದರ್ ಚಾಲನೆ ನೀಡಿದರು. ಕೋಟ ಜನತಾ ಫಿಶ್‌ಮಿಲ್ ವ್ಯವಸ್ಥಾಪಕ ಶ್ರೀನಿವಾಸ ಕುಂದರ್, ಕೋಟ ಗ್ರಾಪಂ ಉಪಾಧ್ಯಕ್ಷ ಪಾಂಡು ಪೂಜಾರಿ, ಗೀತಾನಂದ ಫೌಂಡೇಶನ್ ಸಮಾಜ ಕಾರ್ಯ ವಿಭಾಗದ ರವಿಕಿರಣ್ ಕೋಟ, ಮಣೂರು ಚಿತ್ತಾರಿ ಟ್ರಸ್ಟ್ ಮುಖ್ಯಸ್ಥ ಗೋಪಾಲ್ ಪೈ, ಪರಿಸರವಾದಿ ಕೋ.ಗಿ.ನಾ, ಉದ್ಯಮಿಗಳಾದ ನಾಗರಾಜ್ ಅಮೀನ್, ಮಾಧವ ಪೈ, ಕೋಟದ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಸಂಚಾಲಕಿ ಸುಜಾತಾ ಬಾಯರಿ, ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣದ ಸಂಚಾಲಕ ಅಮೃತ್ ಜೋಗಿ, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಪಂಚವರ್ಣದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.