ಜಿಲ್ಲೆ

ತಂತ್ರಜ್ಞಾನ ಬಳಸಿ ಕಾರ್ಡ್ ರದ್ದುಗೊಳಿಸಿ

ಹುಬ್ಬಳ್ಳಿ : ರಾಜ್ಯ ಸರ್ಕಾರ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದ್ದು, ಈ ಕಾರ್ಯಕ್ಕೆ ತಂತ್ರಜ್ಞಾನ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅರ್ಹರ ಕಾರ್ಡ್​ಗಳು ರದ್ದಾಗಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಕಾರ್ಯವನ್ನು ಆಹಾರ ನಿರೀಕ್ಷಕರಿಗೆ ನೀಡಿದರೆ ಅವರು ಜನರನ್ನು ಶೋಷಣೆ ಮಾಡುವ ಸಾಧ್ಯತೆ ಇದೆ ಎಂದರು.

ಅನರ್ಹ ಬಿಪಿಎಲ್ ಕಾರ್ಡ್​ಗಳನ್ನು ರದ್ದುಗೊಳಿಸುವುದು ರಾಜ್ಯ ಸರ್ಕಾರದ ಕೆಲಸ. ಅನರ್ಹರ ಕಾರ್ಡ್​ಗಳನ್ನು ರದ್ದುಗೊಳಿಸಲು ನಮ್ಮ ಆಕ್ಷೇಪ ಇಲ್ಲ. ಆದರೆ, ಅರ್ಹರಿಗೆ ಅನ್ಯಾಯಬವಾರದು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ 75 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಆದರೆ, ಅವರು ಎಂದಿಗೂ ಜನ್ಮದಿನ ಆಚರಿಸಿಕೊಂಡಿಲ್ಲ. ಈ ಸಂದರ್ಭದಲ್ಲಿ ಸ್ವಸ್ಥ ನಾರಿ- ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸದೃಢ ಭಾರತದ ಅಭಿಯಾನದ ಮೂಲಕ ಆರೋಗ್ಯಯುತ ಸಮಾಜವನ್ನು ನಿಮಾಣ ಮಾಡುವುದು ಪ್ರಧಾನಿ ಅವರ ಮಹತ್ವದ ನಿರ್ಧಾರವಾಗಿದೆ ಎಂದರು.