ಜಿಲ್ಲೆ

ಗೋಕಲ ಶಿಕ್ಷಣ ಸಂಸ್ಥೆಗಳ ಮಾನ್ಯತೆ ರದ್ದು

ಮಳವಳ್ಳಿ: ತಾಲೂಕಿನ ವ್ಯಾಪ್ತಿಯಲ್ಲಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಗೋಕುಲ ಶಿಕ್ಷಣ ಸಂಸ್ಥೆಗಳ ಮಾನ್ಯತೆಯನ್ನು ಶಿಕ್ಷಣ ಇಲಾಖೆ ರದ್ದು ಪಡಿಸಿ ಆದೇಶ ಹೊರಡಿಸಿದೆ.

ತಾಲೂಕಿನ ಟಿ. ಕಾಗೇಪುರ ಗ್ರಾಮದ ಅನುದಾನ ರಹಿತ ಗೋಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಕಲುಷಿತ ಆಹಾರ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು 40 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಟಿ. ಕಾಗೇಪುರ ಗ್ರಾಮದ ಗೋಕುಲ ವಿದ್ಯಾ ಸಂಸ್ಥೆಯಿಂದ ನಡೆಸುತ್ತಿರುವ ಗೋಕುಲ ಹಿರಿಯ ಪ್ರಾಥಮಿಕ ಶಾಲೆ (ಕನ್ನಡ ಮಾಧ್ಯಮ), ಗೋಕುಲ ಪಬ್ಲಿಕ್ ಶಾಲೆ ಆಂಗ್ಲ ಮಾಧ್ಯಮ ಹಾಗೂ ಕಿರುಗಾವಲು ಗ್ರಾಮದ ಗೋಕುಲ ಹಿರಿಯ ಪ್ರಾಥಮಿಕ ಶಾಲೆ, ಈ ಮೂರು ಶಾಲೆಗಳ ಮಾನ್ಯತೆಯನ್ನು ಹಿಂಪಡೆದಿದ್ದಾರೆ. ಮೂರು ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಪರ್ಯಾಯ ದಾಖಲಾತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು, ಪಾಲಕರು ಶಿಕ್ಷಣ ಇಲಾಖೆಯೊಂದಿಗೆ ಸಹಕರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪ್ರಕಟಣೆಯಲ್ಲಿ ಕೋರಿದ್ದಾರೆ.