ಜಿಲ್ಲೆ

capt brijesh chouta

Mangaluru - Hariprasad Rai


ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಅಧ್ಯಕ್ಷತೆಯ ಈ ಸಮಿತಿಯಲ್ಲಿ 14 ಸಂಸದರು, 6 ಮಂದಿ ರಾಜ್ಯಸಭೆ ಸದಸ್ಯರು ಮತ್ತು ಇಬ್ಬರು ಪದನಿಮಿತ್ತ ಸದಸ್ಯರಿದ್ದಾರೆ.
ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯು ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನದ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ.
ಈ ನೇಮಕಾರಿ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ಕ್ಯಾ. ಚೌಟ ನಮ್ಮ ರಕ್ಷಣಾ ಕ್ಷೇತ್ರ ಪ್ರಧಾನಿ ಮೋದಿ ಅವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಓರ್ವ ಯೋಧನಾಗಿ, ಸಂಸತ್ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ ಎಂದು ಹೇಳಿದ್ದಾರೆ.