ಜಿಲ್ಲೆ

ಡ್ರಗ್ಸ್ ಜಾಲ ನಿರ್ಮೂಲನೆಗೆ ಜನರ ಸಹಕಾರವೂ ಅಗತ್ಯ -ಸಂಸದ ಕ್ಯಾ. ಬ್ರಿಜೇಶ್ ಚೌಟ

Mangaluru - Hariprasad Rai

ಮಂಗಳೂರು : ವಿವಿಧ ರಾಜ್ಯಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವ ಮಂಗಳೂರಿನ ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅಭಿನಂದನೆ ಸಲ್ಲಿಸಿದ್ದಾರೆ.
ಡ್ರಗ್ಸ್ ಮುಕ್ತ ಕರಾವಳಿ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಬಹಳ ಮುಖ್ಯ. ಸಂಸದನಾಗಿ ಆಯ್ಕೆಯದ ಬಳಿಕ ನಡೆದ ಮೊದಲ ಸಂಸತ್ ಅಧಿವೇಶದಲ್ಲೇ ಕರಾವಳಿ ಸೇರಿದಂತೆ ದೇಶದೆಲ್ಲೆಡೆ ವ್ಯಾಪಕವಾಗುತ್ತಿರುವ ಡ್ರಗ್ಸ್ ಜಾಲವನ್ನು ತುರ್ತಾಗಿ ಮಟ್ಟ ಹಾಕಬೇಕೆಂದು ಒತ್ತಾಯಿಸಿದ್ದೆ. ಕರಾವಳಿಗೆ ಪೂರೈಕೆಯಾಗುತ್ತಿದ್ದ ಈ ಡ್ರಗ್ಸ್ ದಂಧೆಯ ಮೂಲವನ್ನೇ ಪತ್ತೆ ಮಾಡಿ ದೊಡ್ಡ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡ ಈ ಐತಿಹಾಸಿಕ ಕಾರ್ಯಾಚರಣೆಗೆ ಸಹಕರಿಸಿರುವ ಸಿಸಿಬಿಯ ಎಲ್ಲ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು ಸಂಸದರು ಹೇಳಿದ್ದಾರೆ.