ಜಿಲ್ಲೆ

20 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು - 6 ಮಂದಿ ಗಂಭೀರ

Mangaluru - Nishantha Narayana

ನೆಲ್ಯಾಡಿ: ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಕಂದಕ್ಕೆ ಉರುಳಿ ಆರು ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಗಾಯಾಳುಗಳು ಬೆಂಗಳೂರು ಆರ್. ಟಿ. ನಗರ ನಿವಾಸಿಗಳೆಂದು ತಿಳಿದು ಬಂದಿದೆ. ಒಬ್ಬರು ಪುರುಷ, ನಾಲ್ಕು ಮಂದಿ ಮಹಿಳಾ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದ ಎರಡು ವರ್ಷದ ಮಗುವೊಂದು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.