ಜಿಲ್ಲೆ

ಡಿವೈಡರ್​ಗೆ ಡಿಕ್ಕಿ ಹೊಡೆದು ಬೈಕ್​ ಮೇಲೆ ಬಿದ್ದ ಕಾರು: ಸವಾರ ಸ್ಥಳದಲ್ಲೇ ಸಾವು

mahalakshmihm

ಉಡುಪಿ: ಡಿವೈಡರ್​ ಡಿಕ್ಕಿ ಹೊಡೆದ ಕಾರೊಂದು ವೇಗದ ರಭಸಕ್ಕೆ ನಿಯಂತ್ರಣ ತಪ್ಪಿ ಬೈಕ್​ ಮೇಲೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಟೇಲ್ ಮಣಿಪಾಲ್ ಇನ್ ಬಳಿ ನಡೆದಿದೆ.

ವಿಜಯಪುರದ ನಿವಾಸಿ ಸುನಿಲ್ (24) ಮೃತ ದುರ್ದೈವಿ. ಬಹ್ಮಾವರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ಬಳಿಕ ಪಕ್ಕದ ಸರ್ವಿಸ್​​ ರಸ್ತೆಯ ಮೇಲೆ ಸಂಚರಿಸುತ್ತಿದ್ದ ಬೈಕ್​ ಮೇಲೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಮತ್ತೊಬ್ಬ ಸವಾರ ಬಾಗಲಕೋಟೆಯ ನಿವಾಸಿ ಮಂಜುನಾಥ್​ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)