ಜಿಲ್ಲೆ

ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ದೇವಸ್ಥಾನದ ಗೋಡೆ ಗುದ್ದಿದ ಕಾರು

reportermys

ಮಂಡ್ಯ: ನಗರದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಹಳ್ಳಿಯಲ್ಲಿ ಭಾನುವಾರ ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾನೆ.
ತಾಲೂಕಿನ ಸಿದ್ದಯ್ಯನಕೊಪ್ಪಲು ಗ್ರಾಮದ ತೆಂಗಿನಕಾಯಿ ವ್ಯಾಪಾರಿ ಸತೀಶ್(40) ಮೃತ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸತೀಶ್ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಜಿಲ್ಲಾಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಬಿಸಿಲು ಮಾರಮ್ಮನ ದೇವಾಲಯದ ತಡೆಗೋಡೆಗೆ ಅಪ್ಪಳಿಸಿ ಅದರ ಮೇಲೆ ಹತ್ತಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.