ಜಿಲ್ಲೆ

ಟಂಟಂ-ಕಾರು ಡಿಕ್ಕಿ: ಸ್ಥಳದಲ್ಲೇ ಒಬ್ಬರ ಸಾವು, ಹತ್ತು ಮಂದಿಗೆ ಗಾಯ..

ವಿಜಯಪುರ: ಟಂಟಂ ಹಾಗೂ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ.

ಟಂಟಂ ವಾಹನದಲ್ಲಿ ಪ್ರಯಾಣಿಸುತ್ತಿದ್ದ, ಇಂಗಳಗಿ ನಿವಾಸಿ ಭಾರತಿ ಬಡಿಗೇರ (40) ಮೃತಪಟ್ಟವರು. ಇತರ ಹತ್ತು ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ದೇವರಹಿಪ್ಪರಗಿ ಮತ್ತು ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

ಕಾರ್ಮಿಕರು ಕೊಟಕನೂರಗೆ ಕೂಲಿ ಕೆಲಸಕ್ಕೆ ಹೋಗಿದ್ದು, ಕೆಲಸ‌ ಮುಗಿಸಿ ವಾಪಸ್ ಇಂಗಳಗಿಗೆ ಟಂಟಂ ವಾಹನದಲ್ಲಿ ಬರುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ. ದೇವರಹಿಪ್ಪರಗಿ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.