ಕುಮಟಾ : ರಸ್ತೆಯನ್ನು ದಾಟುತ್ತಿರುವ ಸಂದರ್ಭದಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಧಾರೇಶ್ವರ ನಾಗತೀರ್ಥ ಸಮೀಪ ಶನಿವಾರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಧಾರೇಶ್ವರದ ನಿವಾಸಿ, ಗೌರಿ ಶ್ರೀಧರ ನಾಯ್ಕ(48) ಮೃತಪಟ್ಟ ಮಹಿಳೆ. ಮೃತಳು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು ಎನ್ನಲಾಗಿದೆ.
ಇದನ್ನೂ ಓದಿ: ಶಾಲಾ ಬಾಲಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಮಾನಸಿಕ ಅಸ್ವಸ್ಥ..!
ಈಕೆ ರಸ್ತೆದಾಟುವ ಸಂದರ್ಭದಲ್ಲಿ ಕುಮಟಾದಿಂದ ಹೊನ್ನಾವರ ಕಡೆಗೆ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರನ್ನು ಚಲಾಯಿಸುತ್ತಿದ್ದ ಅಮೃತಾ ಎಂಬವರ ಮೇಲೆ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯ ಬಗ್ಗೆ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.