ಜಿಲ್ಲೆ

ಎನ್‌ಎಚ್-48 ರಸ್ತೆಯ ಸೇತುವೆಗೆ ಕಾರು ಡಿಕ್ಕಿ; ಚಾಲಕ ಸಾವು

Haveri - Kariyappa Aralikatti

ಹಾವೇರಿ: ಕಾರೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಗೌರಿಹಳ್ಳದ ಸೇತುವೆ ಬಳಿ ಎನ್‌ಎಚ್-48ರಲ್ಲಿ ಶುಕ್ರವಾರ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ನಿಂಗಾಪುರ ಗ್ರಾಮದ ಶಶಿಕಾಂತ ಸಂತರಾಮಪ್ಪ ಸಾಲಮಂಟಪ (40) ಮೃತ ವ್ಯಕ್ತಿ.
ಈತ ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಕಾರಿನ ನಿಯಂತ್ರಣ ತಪ್ಪಿ ಗೌರಿಹಳ್ಳದ ಸೇತುವೆಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.