ಜಿಲ್ಲೆ

ಟ್ರಾೃಕ್ಟರ್‌ಗೆ ಕಾರು ಡಿಕ್ಕಿ

ಕಿರಣ್ ಗೌಡ.ಜಿ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿ ಬುಧವಾರ ಟ್ರಾೃಕ್ಟರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಮೈಸೂರಿನಿಂದ ಪಟ್ಟಣದ ಮಾರ್ಗವಾಗಿ ಚಾಮರಾಜನಗರಕ್ಕೆ ತೆರಳುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ಮರಗಳನ್ನು ತುಂಬಿಕೊಂಡು ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಹಬೀಬ್ ಎಂಬುವರ ಕಾಲಿಗೆ ಪೆಟ್ಟು ಬಿದ್ದಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗಿದೆ. ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.