ಜಿಲ್ಲೆ

ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು

ಮಂಜುನಾಥ ತಿಮ್ಮಯ್ಯ

ಮೈಸೂರು: ಕಳಸ್ತವಾಡಿ ಗೇಟ್ ಬಳಿ ಭಾನುವಾರ ಬೆಳಗ್ಗೆ ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಕಳಸ್ತವಾಡಿ ಗ್ರಾಮದ ನಿವಾಸಿ ರಮೇಶ್(48) ಮೃತರು. ಬೆಳಗ್ಗೆ 11 ಗಂಟೆ ಸಮಯದಲ್ಲಿ ರಮೇಶ್ ರಸ್ತೆ ದಾಟುತ್ತಿದ್ದರು.

ಈ ಸಂದರ್ಭದಲ್ಲಿ ಬೆಂಗಳೂರು ಕಡೆಯಿಂದ ಮೈಸೂರು ಕಡೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ನರಸಿಂಹ ರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.