ಜಿಲ್ಲೆ

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಪ್ರಯಾಣಿಕರು ಅಪಾಯದಿಂದ ಪಾರು

ಸೌಮ್ಯ ಆರ್

ಪುತ್ತೂರು ಗ್ರಾಮಾಂತರ: ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಈಶ್ವರಮಂಗಲ ಕಡೆಯಿಂದ ಪುತ್ತೂರು ಕಡೆಗೆ ಶ್ರೀನಿವಾಸ್ ಎಂಬುವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕೌಡಿಚ್ಚಾರು- ಮಡ್ಯಂಗಳ ನಡುವಿನ ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ಮುಂದಕ್ಕೆ ಚಲಿಸಿ ಉಲ್ಟಾ ತಿರುಗಿ ನಿಂತಿದೆ.

ವಿದ್ಯುತ್ ಕಂಬ ಮುರಿದಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದ ಚಾಲಕ ಸಹಿತ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.