ಹಾಸನ: ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬೋರೆಕಾವಲು ಬಳಿ ಅಪಘಾತ ಸಂಭವಿಸಿದೆ.
ಕಾಟಿಹಳ್ಳಿ ಗ್ರಾಮದ ಧನುಷ್ (28), ಬೀರೇಶ್ ( 27) ಸಾವಿಗೀಡಾದವರು. ಅರಕಲಗೂಡು ಕಡೆಯಿಂದ ಹಾಸನದ ಕಡೆ ಬರುತ್ತಿದ್ದ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದೆ. ಅಪ್ಪಳಿಸಿದ ರಭಸಕ್ಕೆ ಸ್ನೇಹಿತರಿಬ್ಬರೂ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಗೊರೂರು ಪೊಲೀಸ್ ಠಾಣಾ ವ್ಯಾಕ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.