ಬೆಳಗಾವಿ: ಲಾರಿ-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿರುವ ಪತಿ ಪರಿಸ್ಥಿತಿ ಚಿಂತಾಜನಕವಾಗಿದೆ.
ಬೆಳಗಾವಿ ಜಿಲ್ಲೆ ಹುಕ್ಕಾರಿ ತಾಲೂಕಿನ ನರಸಿಂಗಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಈ ಭೀಕರ ಅಪಘಾತ ಸಂಭವಿಸಿದೆ. ಇನೋವಾ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ವೈದ್ಯೆ ಡಾ. ಶ್ವೇತಾ ಎಸ್. ಮುರಗೋಡ (40), ಪುತ್ರಿ ಶಿಯಾ ಮುರಗೋಡ (7) ಮೃತಪಟ್ಟವರು. ವೈದ್ಯ ಸಚಿನ ಮುರಗೋಡ ತೀವ್ರ ಗಾಯಗೊಂಡಿದ್ದಾರೆ.
ಬೆಳಗಾವಿ ನಗರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಕೇಶ್ವರ ಪಟ್ಟಣಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ನರಸಿಂಗಪುರ ಗ್ರಾಮದ ಬಳಿಯ ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಕ್ಯಾಂಟರ್‌ಗೆ ಇವರ ಇನೋವಾ ವೇಗವಾಗಿ ಡಿಕ್ಕಿ ಹೊಡೆದಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.