ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವೃತ್ತಿ ಮಾರ್ಗದರ್ಶಿ ಕಾರ್ಯಕ್ರಮದಲ್ಲಿ ನಂದೀಶ್ ವಿ.ಹಿರೇಮಠ ಮಾಹಿತಿ ನೀಡಿದರು. ಶರಣಕುಮಾರ, ವೀಣಾ ರಶ್ಮಿ ಎಂ. ಮೊದಲಾದವರಿದ್ದರು.  
ಜಿಲ್ಲೆ

ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅಗತ್ಯ

ಇಂದಿರಾ ಎನ್ ಕೆ

ಗಂಗೊಳ್ಳಿ: ವಿದ್ಯಾರ್ಥಿ ಜೀವನದಲ್ಲಿ ಯಶಸ್ಸನ್ನು ಸಿದ್ಧಿಸಿಕೊಳ್ಳುವಲ್ಲಿ ಶಿಸ್ತು ಪ್ರಧಾನ ಪಾತ್ರ ವಹಿಸುತ್ತದೆ. ನಮ್ಮದೇ ಹಾದಿಯಲ್ಲಿ ಸಾಗುತ್ತಾ, ನಿರ್ದಿಷ್ಟ ಗುರಿ ಹೊಂದಿ ನಮ್ಮತನವನ್ನು ರೂಢಿಸಿಕೊಳ್ಳಬೇಕು ಎಂದು ಹರಿಹರದ ಕಿರ್ಲೋಸ್ಕರ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಿರ್ದೇಶಕ ನಂದೀಶ್ ವಿ.ಹಿರೇಮಠ ತಿಳಿಸಿದರು.

ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶನಿವಾರ ವ್ಯಕ್ತಿತ್ವ ವಿಕಸನ, ವೃತ್ತಿ ಮಾರ್ಗದರ್ಶಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಎದುರಿಸಬಹುದಾದ ಸಮಸ್ಯೆ-ಸವಾಲು, ಉನ್ನತ ಶಿಕ್ಷಣದಲ್ಲಿ ಲಭ್ಯವಿರುವ ವಿವಿಧ ಕೋರ್ಸ್, ದೇಶದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆ ಇತ್ಯಾದಿ ವಿಚಾರಗಳಿಗೆ ಸಂಬಂಧಿಸಿ ಮಾಹಿತಿ ನೀಡಿದರು.

ಶ್ರೀ ಸಿದ್ಧಿ ಪ್ರತಿಷ್ಠಾನ ಕಾರ್ಯದರ್ಶಿ, ಪ್ರಾಂಶುಪಾಲ ಶರಣಕುಮಾರ, ಆಡಳಿತಾಧಿಕಾರಿ ವೀಣಾ ರಶ್ಮಿ ಎಂ., ಉಪಪ್ರಾಂಶುಪಾಲ ರಾಮ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು. ಸಹಶಿಕ್ಷಕಿ ಸಂಗೀತಾ ಕೆ.ಆರ್. ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಸವಿತಾ ಭಟ್ ವಂದಿಸಿದರು.