ಜಿಲ್ಲೆ

ಕೆಯ್ಯೂರಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ಸೌಮ್ಯ ಆರ್

ಪುತ್ತೂರು ಗ್ರಾಮಾಂತರ: ಕೆಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ‘ಪರೀಕ್ಷಾ ತಯಾರಿ ಹಾಗೂ ವೃತ್ತಿ ಮಾರ್ಗದರ್ಶನ’ ಮಾಹಿತಿ ಕಾರ್ಯಾಗಾರ ಗುರುವಾರ ಕೆಯ್ಯೂರಿನ ಕೆಪಿಎಸ್ ಸಭಾಂಗಣದಲ್ಲಿ ನಡೆಯಿತು.

ಬೆಳ್ಳಾರೆಯ ಸಹಾಯಕ ಪ್ರಾಧ್ಯಾಪಕ ಕಾಂತರಾಜು ಸಿ. ಸಂಪನ್ಮೂಲ ವ್ಯಕ್ತಿಯಾಗಿ, ವಿದ್ಯಾರ್ಥಿಗಳಿಗೆ ಪಿಯುಸಿ ಪರೀಕ್ಷಾ ಸಿದ್ಧತೆ ಹಾಗೂ ಸರ್ಕಾರಿ ಹುದ್ದೆಗಳಿಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕುರಿತು ಮಾಹಿತಿ ನೀಡಿದರು.

ಕೆಪಿಎಸ್ ಪ್ರಾಂಶುಪಾಲ ಇಸ್ಮಾಯಿಲ್ ಪಿ. ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಎ.ಕೆ.ಜಯರಾಮ ರೈ ಕೆಯ್ಯೂರು ಚಾಲನೆ ನೀಡಿದರು. ಉಪಪ್ರಾಂಶುಪಾಲ ವಿನೋದ್ ಕುಮಾರ್ ಕೆ.ಎಸ್, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಬಾಬು ಎಂ. ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ದಿವ್ಯಾ, ಆಶಾಕುಮಾರಿ, ಗಗನಾ ಪಿ, ಜೀವಿತಾ ಕೆ, ನಿರೀಕ್ಷಾ ಎ.ಕೆ. ಪ್ರಾರ್ಥಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಗುಣಶೀಲ ಕೆ.ಎನ್. ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕಿ ಉಮಾಶಂಕರಿ ಎಸ್.ಕೆ. ವಂದಿಸಿದರು. ಇಂಗ್ಲಿಷ್ ಉಪನ್ಯಾಸಕ ಬಾಲಕೃಷ್ಣ ಬೇರಿಕೆ ನಿರೂಪಿಸಿದರು. ಕನ್ನಡ ಉಪನ್ಯಾಸಕ ಆನಂದ ಎನ್, ವಿದ್ಯಾರ್ಥಿಗಳಾದ ಮಹಮ್ಮದ್ ಜಿಯಾದ್, ವಿದ್ಯಾರ್ಥಿ ಸಂಘದ ಸಿಂಚನಾ, ರಂಜೀನಾ, ಲೋಕೇಶ್, ಭವಿಷ್ಯ ಹಾಗೂ ಲಾವ್ಯ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.