ಮಡಿಕೇರಿ:
ಮಡಿಕೇರಿ ನಗರದಲ್ಲಿರುವ ಸ್ವತಂತ್ರ ಭಾರತದ ಪ್ರಥಮ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಪ್ರತಿಮೆ ಮತ್ತು ಸುತ್ತಲಿನ ಉದ್ಯಾನದ ಅಭಿವೃದ್ದಿಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಮ್ಮ ಶಾಸಕರ ನಿಧಿಯಿಂದ ಮೂರು ಲಕ್ಷ ರೂ. ಅನುದಾನ ಒದಗಿಸಿದ್ದಾರೆ.
ಈ ವೇಳೆ ಮಾತನಾಡಿದ ಡಾ. ಮಂತರ್ ಗೌಡ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ದೇಶ ಕಂಡ ಅಪ್ರತಿಮ ಸೇನಾನಿಗಳಾಗಿದ್ದು ಅವರ ಸಾಧನೆಗಳನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಈ ಮಹಾನ್ ನಾಯಕರಿಗೆ ಸಂಬAಧಿಸಿದ ಪ್ರತಿಯೊಂದು ಕಾರ್ಯಕ್ರಮಗಳಿಗೆ ತಮ್ಮ ಸಹಕಾರ ಸದಾ ಇರುತ್ತದೆ ಎಂದು ತಿಳಿಸಿದರು.
ಈ ಸಂಧರ್ಭ ಮುಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಪ್ರಮುಖರಾದ ಪ್ರಕಾಶ್ ಆಚಾರ್ಯ, ತೆನ್ನಿರ ಮೈನಾ, ಮಂಡಿರ ಸದಾ ಮುದ್ದಪ್ಪ ಮತ್ತಿತರರು ಇದ್ದರು.