ಜಿಲ್ಲೆ

ಪ್ರಚೋದನಕಾರಿ ಪೋಸ್ಟ್, ಪ್ರಕರಣ ದಾಖಲು

Mangaluru - Nishantha Narayana

ಪುತ್ತೂರು: ವಾಟ್ಸ್ಯಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್‌ಗಳನ್ನು ಪ್ರಸಾರ ಮಾಡಿದ ಕಾಸರಗೋಡು ಅಡೂರು ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಸರಗೋಡು ಅಡೂರು ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತ ಸಾಮಾಜಿಕ ಜಾಲತಾಣದ ಬರಹಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.