ಜಿಲ್ಲೆ

ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ

Mangaluru - Nishantha Narayana

ಪುತ್ತೂರು: ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತೆ ಜತೆ ಅಪರಿಚಿತ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ ಬಗ್ಗೆ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪುತ್ತೂರಿನ ಕಬಕ ನಿವಾಸಿ ನವೀನ್ ಚಂದ್ರ(೪೯) ಬಂಧಿತ. ಅಪ್ರಾಪ್ತ ಬಾಲಕಿ ತನ್ನ ತಾಯಿಯೊಂದಿಗೆ ಮಂಗಳವಾರ ನೆಹರು ನಗರ ಜಂಕ್ಷನ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಅಪರಿಚಿತನೊಬ್ಬ ಬಂದು ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ ಎಂದು ಬಾಲಕಿ ತಾಯಿ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಽಸಲಾಗಿದೆ.