ಜಿಲ್ಲೆ

ಅಕ್ರಮ ಸ್ಫೋಟಕ ಬಳಕೆ ವಿರುದ್ಧ ಪ್ರಕರಣ

ಇಂದಿರಾ ಎನ್ ಕೆ

ಸಿದ್ದಾಪುರ: ಹಳ್ಳಿಹೊಳೆ ಗ್ರಾಮದ ಅರಮನೆಕೊಡ್ಲು ಎಂಬಲ್ಲಿ ಅಕ್ರಮವಾಗಿ ಕಲ್ಲು ಬಂಡೆ ಸ್ಫೋಟಿಸಿದ ಪರಿಣಾಮ ಸುತ್ತುಮುತ್ತಲಿನ ಮನೆಗಳಿಗೆ ಹಾನಿಯಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಅನಂತಮೂರ್ತಿ ಭಟ್ ಎಂಬುವರು ತಮ್ಮ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಕಲ್ಲು ಬಂಡೆ ಸ್ಫೋಟಿಸುವ ಸ್ಫೋಟಕಗಳನ್ನು ಸಂಗ್ರಹಿಸಿ, ಕೆಂಪು ಕಲ್ಲು ಹಾಗೂ ಕಲ್ಲು ಬಂಡೆ ಸ್ಫೋಟಿಸಿದ್ದಾರೆ. ಪರಿಣಾಮ ಅಕ್ಕಪಕ್ಕದ ಹಲವು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಶಂಕರನಾರಾಯಣ ಪೊಲೀಸ್ ಠಾಣೆ ಉಪ ನಿರೀಕ್ಷಕ ನಾಸೀರ್ ಹುಸೇನ್, ಸ್ಫೋಟಕ್ಕೆ ಬಳಸಿದ ಸೊತ್ತು ವಶಪಡಿಸಿಕೊಂಡಿದ್ದಾರೆ.