ಜಿಲ್ಲೆ

ಬಡ ಕುಟುಂಬದ ಪರನಿಂತ ಶಾಸಕ ​ ಪೂಂಜಾ ವಿರುದ್ಧ ಕೇಸ್​ ಖಂಡನಾರ್ಹ

ಗೋಪಾಲಕೃಷ್ಣ ಪಾದೂರ್

ಉಡುಪಿ: ಬಡ ಕುಟುಂಬದ ಪರನಿಂತ ಬೆಳ್ತಂಗಡಿ ಶಾಸಕ ಹರೀಶ್​ ಪೂಜಾ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕೇಸ್​ ದಾಖಲೆ ಮಾಡಿರುವುದು ಖಂಡನಾರ್ಹ ಎಂದು ಉಡುಪಿ ಶಾಸಕ ಯಶ್​ ಪಾಲ್​ ಸುವರ್ಣ ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯಕ್ಕೆ ಒಳಗಾದ ಬಡ ಕುಟುಂಬದ ಪರನಿಂತ ಬೆಳ್ತಂಗಡಿ ಶಾಸಕ ಹರೀಶ್​ ಪೂಂಜಾ ಮೇಲೆ ಅಧಿಕಾರಿಗಳ ಮೂಲಕ ಕಾಂಗ್ರೆಸ್​ ಸರ್ಕಾರ ಕೇಸ್​ ದಾಖಲಿಸಿದೆ. ಓರ್ವ ಜವಾಬ್ದಾರಿಯುತ ಶಾಸಕನಾಗಿ ತನ್ನ ಕ್ಷೇತ್ರದ ಬಡ ಕುಟುಂಬದ ಪರ ನಿಂತು ದೌರ್ಜನ್ಯವನ್ನು ಖಂಡಿಸುವುದು ತಪ್ಪಾಗಿದೆ. ಕರಾವಳಿಯ ಬಿಜೆಪಿ ಶಾಸಕರನ್ನು ಶತಾಯ ಗತಾಯ ಕಟ್ಟಿಹಾಕುವ ಪ್ರಯತ್ನಕ್ಕೆ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಇಂತಹ ನೂರು ಕೇಸ್​ ಗಳನ್ನು ಬಿಜೆಪಿ ಶಾಸಕರ ವಿರುದ್ಧ ದಾಖಲಿಸಿದರೂ ಬಡ ಜನರ ಹಿತಕಾಯುವ ವಿಚಾರದಲ್ಲಿ ಎಂದಿಗೂ ರಾಜೀಯಾಗುವ ಪ್ರಶ್ನೆಯೇ ಇಲ್ಲ. ಸಂಘಟನೆಯ ಹಿನ್ನೆಲೆಯಲ್ಲಿ ಬೆಳೆದು ಬಂದ ಬಿಜೆಪಿ ಶಾಸಕರು ಕಾಂಗ್ರೆಸ್​ ಸರ್ಕಾರದ ಬೆದರಿಕೆ ತಂತ್ರಗಳಿಗೆ ಮಣಿಯುವುದಿಲ್ಲ ಎಂದು ತಿಳಿಸಿದ್ದಾರೆ.