ಜಿಲ್ಲೆ

ತರಕಾರಿ ಅಂಗಡಿಯಲ್ಲಿ ನಗದು ಕಳ್ಳತನ

ಇಂದಿರಾ ಎನ್ ಕೆ

ಬಂಟ್ವಾಳ: ಮೆಲ್ಕಾರ್‌ನ ತರಕಾರಿ ಅಂಗಡಿಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಬೆಳಕಿಗೆ ಬಂದಿದೆ. ಮಹಮ್ಮದ್ ಶರೀಫ್ ಎಂಬುವರ ಚಂದ್ರಿಕಾ ತರಕಾರಿ ಅಂಗಡಿಯ ಬೀಗ ಮುರಿದು ಹಣಕ್ಕಾಗಿ ಜಾಲಾಡಿದ್ದಾರೆ. ಶರೀಫ್ ಸಾಮಾಜಿಕ ಸೇವಾ ಕರ್ತರಾಗಿದ್ದು ಸರ್ಕಾರಿ ಶಾಲಾ ಅಭಿವೃದ್ಧಿಗಾಗಿ ತನ್ನ ಅಂಗಡಿಯಲ್ಲಿ ಇಟ್ಟಿದ್ದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ದೋಚಿದ್ದಾರೆ. ಕಾಣಿಕೆ ಡಬ್ಬಿ ತುಂಬಿದ್ದು ಅಂದಾಜು 5 ಸಾವಿರಕ್ಕಿಂತಲೂ ಅಧಿಕ ಮೊತ್ತದ ಹಣ ಅದರಲ್ಲಿತ್ತು ಎನ್ನಲಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.