???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ದೇಶದಲ್ಲಿ ಜಾತಿ ಪದ್ಧತಿ ಇನ್ನೂ ಜೀವಂತ

Mysuru - Desk - Naveen Kumar H P


ಮದ್ದೂರು : ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ದಶಕಗಳೇ ಕಳೆದಿದ್ದರೂ ಇಂದಿಗೂ ಜಾತಿ ಪದ್ಧತಿ ಜಾರಿಯಲ್ಲಿರುವುದು ಆತಂಕಕಾರಿ ಸಂಗತಿ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ ರಾಜ್ಯ ಮುಖಂಡ ಜಿ.ಎನ್.ನಾಗರಾಜು ಬೇಸರ ವ್ಯಕ್ತಪಡಿಸಿದರು.


ದಲಿತ ಹಕ್ಕುಗಳ ಸಮಿತಿಯಿಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


ದೇಶದಲ್ಲಿ ಇಂದಿಗೂ ಜಾತಿಪದ್ಧತಿ, ಅಸ್ಪಶ್ಯೃತೆ ಜಾರಿಯಲ್ಲಿದೆ. ನಿತ್ಯ ದಲಿತರ ಮೇಲೆ ಹಲ್ಲೆ, ದೌರ್ಜನ್ಯಗಳು ವರದಿಯಾಗುತ್ತಿದೆ. ಇದರ ನಿಯಂತ್ರಣಕ್ಕೆ ಆಡಳಿತ ನಡೆಸುವ ಸರ್ಕಾರಗಳು ಮುಂದಾಗದಿರುವುದು ವಿಪರ್ಯಾಸ ಸಂಗತಿಯಾಗಿದೆ. ಸರ್ವಜನಾಂಗದ ಶಾಂತಿಯ ತೋಟದಲ್ಲಿ ಮಾನವರೇ ಮನುಷ್ಯರನ್ನಾಗಿ ಪರಿಗಣಿಸದಿರುವುದು ಬೇಸರದ ಸಂಗತಿಯಾಗಿದೆ. ಇಂತಹ ಹಲವಾರು ಬದಲಾವಣೆಗಳನ್ನು ತರಲು ಅಧ್ಯಯನ ಶಿಬಿರಗಳು ಅತ್ಯವಶ್ಯಕವಾಗಿವೆ ಎಂದರು.


ಇತ್ತೀಚಿನ ಜಾತಿವ್ಯವಸ್ಥೆ ಪ್ರಬಲವಾಗಿದ್ದು, ಮೀಸಲಾತಿ ಕಿತ್ತು ಹಾಕಲು ಕಳೆದ ಹತ್ತು ವರ್ಷಗಳಿಂದಲೂ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಸರ್ವ ಪ್ರಯತ್ನಕ್ಕೆ ಮುಂದಾಗುತ್ತಿದೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ಹೊರಗಿಡುವ ಉದ್ದೇಶವನ್ನು ಹೊಂದಿರುವುದಾಗಿ ಆರೋಪಿಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಸಂವಿಧಾನಾತ್ಮಕ ಹಕ್ಕುಗಳು ಕಣ್ಮರೆಯಾಗಿ ಜಾತಿ ತಾರತಮ್ಯ, ಜಾತಿ ಭೇದವನ್ನು ವ್ಯವಸ್ಥಿತವಾಗಿ ಪ್ರೋತ್ಸಾಹಿಸುತ್ತಿದ್ದಾರೆ. ಹಿಂದು ಧರ್ಮದ ಹೆಸರಿನಲ್ಲಿ ಅಸ್ಪಶ್ಯೃತೆಯನ್ನು ಜೀವಂತವಾಗಿ ಇಡುವ ಮೂಲಕ ದಲಿತ ಸಮುದಾಯಗಳಿಗೆ ಸ್ವಾಭಿಮಾನದ ಹಕ್ಕನ್ನು ಕಸಿದುಕೊಳ್ಳುತ್ತ ಬಂದಿದೆ ಎಂದು ದೂರಿದರು.

ದಲಿತ ಸಂಘರ್ಷ ಸಮಿತಿಯ ರಾಜ್ಯ ಉಪಾಧ್ಯಕ್ಷ ಬಿ.ರಾಜಶೇಖರಮೂರ್ತಿ ವಿಶೇಷ ಉಪನ್ಯಾಸ ನೀಡಿದರು. ಸಂಕಲ್ಪ ಪುಸ್ತಕವನ್ನು ಗಣ್ಯರು ಬಿಡಗಡೆ ಮಾಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ಕೃಷ್ಣೇಗೌಡ, ಸಿಐಟಿ ಸಂಘಟನೆಯ ಪ್ರದೀಪ್ ಕುಮಾರ್, ದಲಿತ ಹಕ್ಕುಗಳ ಸಮಿತಿಯ ಜಿಲ್ಲಾಧ್ಯಕ್ಷ ಆರ್.ಕೃಷ್ಣ, ಜಿಲ್ಲಾ ಖಜಾಂಚಿ ವಿಜಯೇಂದ್ರಕುಮಾರ್, ಜಿಲ್ಲಾ ಉಪಾಧ್ಯಕ್ಷ ಕೆ.ಎಸ್.ಶಿವಲಿಂಗಯ್ಯ, ಮುಖಂಡ ಮಲ್ಲಿಕಾರ್ಜುನಸ್ವಾಮಿ ಇದ್ದರು.